×
Ad

ಮಣಿಪಾಲ: ರಾಜ್ಯದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Update: 2023-07-11 14:19 IST

ಮಣಿಪಾಲ ಜು.11 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಮಣಿಪಾಲದ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಿದರು.

ಕರ್ನಾಟಕದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು.

ಕೊಡಗು ಜಿಲ್ಲೆಯಿಂದ ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿನಿ ಮಡಿಕೇರಿಯ ಬಿ.ಎಸ್.ರಫೀಖ್ ಅಹಮದ್ ಅವರ ಪುತ್ರಿ ರಿದಾ ಸುಮನ್ ಬಿ.ಆರ್(98.4) ಹಾಗೂ ಪಿ.ಯು.ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿ ಕುಶಾಲನಗರದ ಕುಡೆಕಲ್ ಗಣೇಶ್ ಅವರ ಪುತ್ರಿ ಶಿವಾನಿ ಕೆ.ಜಿ(93.87) ಸನ್ಮಾನಕ್ಕೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್, ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಎ.ಆರ್.ಕುಟ್ಟಪ್ಪ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ರಾಜ್ಯ ಸಂಘ ಹಾಗೂ ವಿವಿಧ ಜಿಲ್ಲಾ ಘಟಕಗಳ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳ ಕುಟುಂಬದ ಸದಸ್ಯರು ಹಾಜರಿದ್ದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News