×
Ad

ಪುತ್ತೂರು: ಲಾಡ್ಜ್ ನಲ್ಲಿ ಮೃತದೇಹ ಪತ್ತೆ

Update: 2023-07-08 19:18 IST

ಪುತ್ತೂರು: ನಗರದ ಲಾಡ್ಜ್ ಒಂದರಲ್ಲಿ ರೂಮ್ ಪಡೆದಿದ್ದ ವ್ಯಕ್ತಿಯೊಬ್ಬರ ಮೃತದೇಹ ಕುಳಿತ ಸ್ಥಿತಿಯಲ್ಲಿ ಶನಿವಾರ ಸಂಜೆ ಪತ್ತೆಯಾಗಿದೆ.

ನಗರದಲ್ಲಿರುವ ತಂಪು ಪಾನೀಯದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶ್ರೀನಿವಾಸ್(40) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಕಳೆದ ಹಲವು ವರ್ಷಗಳಿಂದ ತಂಪು ಪಾನೀಯದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಕೆಲವೊಮ್ಮೆ ಈ ಲಾಡ್ಜ್ ನಲ್ಲಿ ಕೊಠಡಿಯನ್ನು ಪಡೆದುಕೊಂಡು ತಂಗುತ್ತಿದ್ದರು ಎನ್ನಲಾಗಿದೆ. ಕಳೆದ 2 ದಿನಗಳ ಹಿಂದೆ ಕೊಠಡಿ ಪಡೆದುಕೊಂಡು ತಂಗಿದ್ದರು. ಕೊಠಡಿಯ ಒಳಗೆ ಕುಳಿತ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ.

ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News