×
Ad

ಜುಲೈ 8ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-07-06 21:39 IST

ಉಡುಪಿ, ಜು.6:ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಜುಲೈ 8ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಅಪರಾಹ್ನ 12 ಗಂಟೆಗೆ ಪಡುಬಿದ್ರಿ ಮತ್ತು ಉಡುಪಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡುವರು. ಅಪರಾಹ್ನ 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿ ಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯಲ್ಲಿ ಅತಿವೃಷ್ಟಿಯ ಕುರಿತಂತೆ ತೆಗೆದುಕೊಳ್ಳಬೇಕಾದಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ಕಾರ್ಯಪಡೆಯೊಂದಿಗೆ ಸಮಾಲೋಚನೆ ನಡೆಸುವರು. ನಂತರ ಸಂಜೆ 7:30ಕ್ಕೆ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News