×
Ad

ನೆರೆ ಪರಿಹಾರಕ್ಕೆ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಸೂಚನೆ

Update: 2023-07-07 23:07 IST

ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿರುವುದನ್ನು ಅರಿತು ಅಧಿವೇಶನವನ್ನು ಬಿಟ್ಟು ಕ್ಷೇತ್ರಕ್ಕೆ ಆಗಮಿಸಿದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧಿಕಾರಿಗಳ ಸಭೆ ನಡೆಸಿದರು.

ನೆರೆಯಿಂದ ಸಂತ್ರಸ್ತರಾದವರಿಗೆ ಯಾವುದೇ ಕಾರಣಕ್ಕೂ ವಿಳಂಬವಿಲ್ಲದೆ ಪರಿಹಾರ ನೀಡಬೇಕು. ನೆರೆಯಿಂದ ರೈತರ ಗದ್ದೆಯ ಕಂಟ, ಪಿಚ್ಚಿಂಗ್ ಹಾಳಾದರೆ ಬೆಳೆಹಾನಿಯಾಗಿವುದಕ್ಕೂ ಪೂರ್ವ ಅವರಿಗೆ ಮರು ನಿರ್ಮಾಣ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿದ್ದ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಹೊನ್ನಾವರ, ಭಟ್ಕಳದ ತಾಲೂಕಾ ಮಟ್ಟದ ಅಧಿಕಾರಿಗಳು ಹಾಜರಿದ್ದು ಅಧಿಕಾರಿಗಳಿಂದ ನೆರೆಯಿಂದ ಹಾನಿಯಾದ ಕುರಿತು ಮಾಹಿತಿ ಪಡೆದುಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News