ತಲಪಾಡಿ: ಆ್ಯಂಬುಲೆನ್ಸ್ ಢಿಕ್ಕಿಯಾಗಿ ಪಾದಚಾರಿ ಮೃತ್ಯು
Update: 2023-07-02 20:36 IST
ಉಳ್ಳಾಲ: ಆ್ಯಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತಲಪಾಡಿ ಬಳಿ ರವಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಕಾಸರಗೋಡು ಕಯ್ಯಾರ ಸಮೀಪದ ಹೇರೂರು ಬಟ್ಯೋಡ್ ನಿವಾಸಿ ಫ್ರಾನ್ಸಿಸ್ ಡಿಸೋಜ(62) ಎಂದು ಗುರುತಿಸಲಾಗಿದೆ.
ಅವರು ತಲಪಾಡಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಲೆಂದು ರವಿವಾರ ತಲಪಾಡಿಗೆ ಬಂದಿದ್ದರು. ಬಸ್‌ನಿಂದ ಇಳಿದು ರಸ್ತೆ ದಾಟುವಾಗ ಆ್ಯಂಬುಲೆನ್ಸ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.