×
Ad

ಕಾರ್ಕಳ : ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಜೀಪ್ ಅಪಘಾತ

Update: 2023-06-24 12:27 IST

ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಜೀಪೊಂದರ ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕ ಪಂಜುಗುಳ ರೋಹಿತ್ ರೆಡ್ಡಿ ಅವರಿಗೆ ಯಾವುದೇ ಗಾಯಗಳುಂಟಾಗಿಲ್ಲ ಎಂದು ತಿಳಿದು ಬಂದಿದೆ.

ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುಗೆ ಸಿಲುಕಿದ ಜೀಪ್ ಜಖಂ ಗೊಂಡಿದೆ.

ಕಾರ್ಕಳ ಪೊಲೀಸರ ಸಹಕಾರದೊಂದಿಗೆ ಪ್ರತ್ಯೇಕ ವಾಹನದಲ್ಲಿ ಶಾಸಕರು ಶೃಂಗೇರಿ ಕಡೆಗೆ ಪ್ರಯಾಣಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News