×
Ad

ಜೂ.26ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

Update: 2023-06-25 18:23 IST

ಉಡುಪಿ, ಜೂ.25: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯು ಜೂ.26ರಂದು ಬೆಳಗ್ಗೆ 10:30ಕ್ಕೆ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ.

ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್, ಮಾಜಿ ಶಾಸಕ ಗೋಪಾಲ ಪೂಜಾರಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಿದ್ದ ಮುಖಂಡರುಗಳು, ಬ್ಲಾಕ್ ಅಧ್ಯಕ್ಷರುಗಳು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಕೆಪಿಸಿಸಿ ಸಂಯೋಜಕರು ಹಾಗೂ ಇತರ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿರುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News