×
Ad

ಉಡುಪಿ: ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

Update: 2023-07-14 19:40 IST

ಉಡುಪಿ: ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಮುಂಜಾನೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣ, ಮುಖ್ಯಪ್ರಾಣರ ದರ್ಶನ ಪಡೆದರು.

ದೇವರ ದರ್ಶನದ ಬಳಿಕ ಅವರ ಮಠದಲ್ಲಿದ್ದ ಕಾಣಿಯೂರು ಮಠಾಧೀಶ ರಾದ ಶ್ರೀವಿದ್ಯಾವಲ್ಲಭ ತೀರ್ಥರಿಂದ ಪ್ರಸಾದ ಸ್ವೀಕರಿಸಿದರು. ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ ಪಾಡಿಗಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಅವರು ರಥಬೀದಿಯಲ್ಲಿರುವ ಅದಮಾರು ಮಠಕ್ಕೆ ತೆರಳಿ ಅಲ್ಲಿ ತಮ್ಮ ಚಾತುರ್ಮಾಸ್ಯ ವ್ರತವನ್ನು ಕೈಗೊಂಡಿರುವ ತಮ್ಮ ಗುರುಗಳಾದ ಅದ ಮಾರು ಮಠ ಹಿರಿಯ ಯತಿ ಶ್ರೀವಿಶ್ವಪ್ರಿಯ ತೀರ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಅದಮಾರು ಮಠದ ವತಿಯಿಂದ ಕೇಂದ್ರ ಸಚಿವೆಗೆ ಗೌರವಾರ್ಪಣೆ ನಡೆಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News