×
Ad

ಉಡುಪಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Update: 2023-07-13 22:47 IST

ಉಡುಪಿ, ಜು.13: ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಇಂದು ರಾತ್ರಿ ಉಡುಪಿಗೆ ಆಗಮಿಸಿದರು.

ಜು.14ರ ಬೆಳಗ್ಗೆ 11 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News