×
Ad

ಉಪ್ಪಿನಂಗಡಿ: ಹೆಡ್‍ಕಾನ್‍ಸ್ಟೇಬಲ್ ಕೃಷ್ಣಪ್ಪ ನಾಯ್ಕ ನಿಧನ

Update: 2023-07-12 18:29 IST

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ಹೆಡ್ ಕಾನ್‍ಸ್ಟೇಬಲ್ ಕೃಷ್ಣಪ್ಪ ನಾಯ್ಕ ಜಿ. (46) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಇವರು 1997ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಕುಶಾಗ್ರಮತಿ ಪೊಲೀಸ್ ಸಿಬ್ಬಂದಿಯಾಗಿದ್ದ ಇವರು ಮಂಗಳೂರಿನ ಟ್ರಿಪಲ್ ಮರ್ಡರ್ ಪ್ರಕರಣದಲ್ಲಿ ಆರೋಪಿಗಳನ್ನು ಬೆನ್ನಟ್ಟಿ ಹಿಡಿಯುವಲ್ಲಿ ತನ್ನ ಕೌಶಲ್ಯತೆಯನ್ನು ಮೆರೆದಿದ್ದರು. ಮಂಗಳೂರು ದಕ್ಷಿಣ, ಪುಂಜಾಲಕಟ್ಟೆ, ಪುತ್ತೂರು ನಗರ ಪೊಲೀಸ್ ಠಾಣೆ, ಗ್ರಾಮಾಂತರ ಪೊಲೀಸ್ ಠಾಣೆ, ಲಾಟರಿ ನಿಷೇಧ ದಳ, ಅಪರಾಧ ವಿಭಾಗ, ಗುಪ್ತ ಮಾಹಿತಿ ವಿಭಾಗ, ಹಿರಿಯ ಅಧಿಕಾರಿಗಳ ಅಂಗರಕ್ಷಕರಾಗಿಯೂ ಇವರು ಸೇವೆ ಸಲ್ಲಿಸಿದ್ದರು.

ಪೊಲೀಸ್ ಇಲಾಖೆಯಲ್ಲಿ 26 ವರ್ಷಗಳ ಸೇವೆ ಸಲ್ಲಿಸಿರುವ ಇವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ , ಒರ್ವ ಪುತ್ರ , ಒರ್ವ ಪುತ್ರಿಯನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News