×
Ad

ಪುತ್ತೂರು: ಮಹಿಳೆಗೆ ಬಸ್ಸಿನಲ್ಲಿ ಕಿರುಕುಳ; ಸುಬ್ರಹ್ಮಣ್ಯ ಭಟ್ ಸೆರೆ

Update: 2023-06-23 23:36 IST

ಪುತ್ತೂರು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಬ್ಬರೊಂದಿಗೆ ಸಹ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ಮಹಮ್ಮದ್ ಅಶ್ರಫ್ ಅವರ ಪತ್ನಿ ಶಹನಾಝ್ (20) ದೂರು ನೀಡಿರುವ ಮಹಿಳೆ. ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಸ್ಸಿನಲ್ಲಿ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ಕಿರುಕುಳ ಪ್ರಕರಣ ನಡೆಸಿದೆ ಎಂದು ಮಹಿಳೆ ದೂರಿದ್ದಾರೆ.

ತಾನು ಗುರುವಾರ ತನ್ನ ತಾಯಿಯೊಂದಿಗೆ ಉಪ್ಪಳದಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಸೀಟಿನ ಮಧ್ಯದಲ್ಲಿ ಕೈಹಾಕಿ ಹಿಂಬದಿ ಸೊಂಟದ ಕೆಳ ಭಾಗವನ್ನು ಹಿಡಿದು ಅಶ್ಲೀಲವಾಗಿ ವರ್ತಿಸಿದ್ದಾನೆ. ಯಾಕೆ ಈ ರೀತಿಯಾಗಿ ವರ್ತಿಸುತ್ತೀರಿ ಎಂದು ಪ್ರಶ್ನಿಸುತ್ತಿದ್ದಂತೆಯೇ ಆತ ಬೊಳುವಾರಿನಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದಾನೆ ಎಂದು ಶಹನಾಝ್‌ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವ ಆರೋಪಿ ಸುಬ್ರಹ್ಮಣ್ಯ ಭಟ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News