×
Ad

ಕಾರವಾರ‌: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ನ ಚಾಸಿಸ್ ತುಂಡು; ಪಲ್ಟಿಯಾಗುತ್ತಿದ್ದ ಬಸ್ಸನ್ನು ತಡೆದು ನಿಲ್ಲಿಸಿದ ಜನರು!

Update: 2024-01-02 12:38 IST

ಕಾರವಾರ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ನ ಚಾಸಿಸ್ ತುಂಡಾಗಿ ಬಸ್‌ ನೆಲಕ್ಕೊರಗಿದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಾರವಾರ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

 ಸುಮಾರು ಐವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದ ಕಾರವಾರ ನಗರದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ  ಹಿಂಬಂದಿಯ ಚಾಸಿಸ್  ತುಂಡಾಗಿ, ರಸ್ತೆಯಲ್ಲಿಯೇ ಬಸ್ ಪಲ್ಟಿಯಾಗುವ ಹಂತಕ್ಕೆ ತಲುಪಿತ್ತು. ಆದರೆ ಉರುಳುತ್ತಿದ್ದ ಬಸ್ಸನ್ನು ಸಾರ್ವಜನಿಕರೇ ತಡೆದು‌ ನಿಲ್ಲಿಸಿ ಸಂಭವನೀಯ ಅವಘಡಗಳನ್ನು ತಪ್ಪಿಸಿದ್ದಾರೆ. ಬಸ್ಸಿನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಕಂಡೀಷನ್ ಇಲ್ಲದ ಬಸ್ಸನ್ನು ಒಡಾಡಲು ಬಿಟ್ಟ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಿಂದಾಗಿ ಕಾರವಾರ- ಕೈಗಾ ರಸ್ತೆ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News