×
Ad

ಕಾಸರಗೋಡು: ವೃದ್ಧ ಆತ್ಮಹತ್ಯೆ

Update: 2025-09-05 22:52 IST

ಕಾಸರಗೋಡು: ವೃದ್ಧರೋರ್ವ ರು ಸ್ವತಃ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ.

ಮದಂಗಲ್ಲಿನ ಸುಬ್ರಾಯ ಭಟ್ (86) ಮೃತಪಟ್ಟವರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥತೆ ಘಟನೆಗೆ ಕಾರಣ ಎಂದು ಪೊಲೀಸರ ಪ್ರಾಥಮಿಕ ಮಾಹಿತಿ ಯಿಂದ ತಿಳಿದುಬಂದಿದೆ. ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News