ಕುಂಬಳೆ ಸರಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

Update: 2026-08-10 12:56 IST

ಕಾಸರಗೋಡು: ಕುಂಬಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಸಾರ್ವಜನಿಕ ಶಿಕ್ಷಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎನ್.ಶಂಸುದ್ದೀನ್ ಸೋಮವಾರ ಉದ್ಘಾಟಿಸಿದರು.

ಕಿಫ್ಬಿ-ಕಿಲಾ ಯೋಜನೆಯಡಿ 3.90 ಕೋಟಿ ರೂ. ವೆಚ್ಚದಲ್ಲಿ 18 ಸುಸಜ್ಜಿತ ತರಗತಿ ಕೋಣೆಗಳನ್ನೊಳಗೊಂಡ ಈ ಅತ್ಯಾಧುನಿಕ ಕಟ್ಟಡವನ್ನು ನಿರ್ಮಿಸಲಾಗಿದೆ.

ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಅಬ್ರಹಾಂ, ಬ್ಲಾಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲಾ ಕುಂಞಿ ಚೆರ್ಕಳ, ಜಿಲ್ಲಾ ಪಂಚಾಯತ್ ಸದಸ್ಯ ಅಝೀಝ್

ಕಳತ್ತೂರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಎಂ.ಬಲ್ಕೀಸ್ ಸೇರಿದಂತೆ ಹಲವು ಪ್ರಮುಖ ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ.ಅಬ್ದುಲ್ ಖಾದರ್ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News