ಕಾಸರಗೋಡು: ತೀವ್ರ ರಕ್ತಸ್ರಾವದಿಂದ 16ರ ಹರೆಯದ ಬಾಲಕಿ ಮೃತ್ಯು
Update: 2025-05-13 20:42 IST
ಕಾಸರಗೋಡು: ಹದಿನಾರು ವರ್ಷದ ಬಾಲಕಿಯೋರ್ವಳು ತೀವ್ರ ರಕ್ತ ಸ್ರಾವದಿಂದ ಮೃತಪಟ್ಟ ಘಟನೆ ವೆಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಆಕೆ ನಾಲ್ಕೂವರೆ ತಿಂಗಳ ಗರ್ಭಿಣಿಯಾಗಿದ್ದಳು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ಕಾಸರಗೋಡಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಎಂದು ತಿಳಿದು ಬಂದಿದೆ.
ಗರ್ಭಪಾತ ಮಾಡಿಕೊಳ್ಳಲು ಬಾಲಕಿ ಯಾವುದೋ ಔಷಧಿ ಸೇವಿಸಿರಬೇಕು ಎನ್ನಲಾಗಿದೆ. ಔಷಧ ದ ಅಡ್ಡಪರಿಣಾಮದಿಂದ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ವೆಳ್ಳರಿಕುಂಡು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.