ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ: ಜೂ.16ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ
Update: 2025-06-15 16:57 IST
(ಫೈಲ್ ಫೋಟೊ)
ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ (ಜೂನ್ 16) ಸೋಮವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಜಿಲ್ಲೆಯಲ್ಲಿ ಜೂ.16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ವೃತ್ತಿಪರ ಶಿಕ್ಷಣ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯ, ಮದ್ರಸ, ಅಂಗನವಾಡಿಗಳು, ಟ್ಯುೂಶನ್ ಸೆಂಟರ್ ಗಳಿಗೆ ರಜೆ ಅನ್ವಯ ವಾಗಲಿದೆ. ಪೂರ್ವ ನಿರ್ಧರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.