ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ: ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ
Update: 2025-07-17 17:57 IST
ಕಾಸರಗೋಡು: ಭಾರೀ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ, ಮದ್ರಸ, ಕೇಂದ್ರ ವಿದ್ಯಾಲಯ, ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಗುರುವಾರವೂ ಶಾಲೆಗಳಿಗೆ ರಜೆ ನೀಡಲಾಗಿತ್ತು. ಪೂರ್ವ ನಿಗಧಿತ ಪರೀಕ್ಷೆಗಳು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ತಿಳಿಸಿದ್ದಾರೆ.
ಜುಲೈ 20 ತನಕ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.