ಕಾಸರಗೋಡು: ಬಕ್ರೀದ್ ಹಿನ್ನೆಲೆಯಲ್ಲಿ ಜೂ.6ರಂದು ವೃತ್ತಿಪರ ಕಾಲೇಜು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ
Update: 2025-06-05 21:49 IST
ಸಾಂದರ್ಭಿಕ ಚಿತ್ರ
ಕಾಸರಗೋಡು; ಬಕ್ರೀದ್ ಹಿನ್ನೆಲೆಯಲ್ಲಿ ಜೂ.6ರಂದು ಕೇರಳದಲ್ಲಿ ವೃತ್ತಿಪರ ಕಾಲೇಜು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ ನೀಡಿದೆ.
ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಎಲ್ಲಾ ವೃತ್ತಿಪರ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯ ಆಗಲಿದೆ.
ಬಕ್ರೀದ್ ಶನಿವಾರ ಆಚರಿಸಲಾಗುತ್ತಿದ್ದು, ಶನಿವಾರವೂ ಶಾಲೆ ಹಾಗೂ ಸರಕಾರಿ ಸಂಸ್ಥೆಗಳಿಗೆ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ ನೀಡಿದೆ.