×
Ad

ಜು.31ರಂದು ಕಾಸರಗೋಡು ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಕೆ.ಇಂಪಾಶೇಖರ್

Update: 2024-07-30 19:01 IST

ಕೆ.ಇಂಪಾಶೇಖರ್

ಕಾಸರಗೋಡು: ಸತತವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.31ರಂದು ಕಾಸರಗೋಡು ಜಿಲ್ಲೆಯಲ್ಲಿ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ.

ಪೂರ್ವ ನಿಗದಿತ ಪರೀಕ್ಷೆಗಳಿಗೆ ರಜೆ ಅನ್ವಯ ಇಲ್ಲ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆಯ ಅಬ್ಬರಕ್ಕೆ ಪ್ರವಾಹ ಸ್ಥಿತಿ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಮಂಗಳವಾರವೂ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ವಿಪತ್ತು ನಿವಾರಣಾ ಪ್ರಾಧಿಕಾರದ ಸಭೆ ಮಂಗಳವಾರ ನಡೆಯಿತು. ಅಗತ್ಯ ತುರ್ತು ಕಾರ್ಯಾಚರಣೆಗೆ ಸನ್ನದ್ಧರಾಗಲು ನಿರ್ಧರಿಸಲಾಗಿದೆ.

ತಗ್ಗು ಪ್ರದೇಶ ಹಾಗೂ ನದಿಯ ಪರಿಸರದಲ್ಲಿ ವಾಸವಾಗಿರುವ ಕುಟುಂಬಗಳು ಅಗತ್ಯ ಬಿದ್ದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಗೊಳ್ಳಬೇಕು. ಭೂಕುಸಿತದಂತಹ ಘಟನೆ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ತುರ್ತು ಕ್ರಮಕ್ಕೆ ಜಿಲ್ಲಾಡಳಿತವನ್ನು ಸಂಪರ್ಕಿಸ ಬಹುದು ಎಂದು ಸಭೆಯು ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News