ಕಾಸರಗೋಡು | ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆ ಕೆರಳಿಸುವ ಪೋಸ್ಟ್: ಬಿಜೆಪಿ ರಾಷ್ಟ್ರೀಯ ವಕ್ತಾರ ಅನಿಲ್ ಆ್ಯಂಟನಿ ವಿರುದ್ಧ ಪ್ರಕರಣ ದಾಖಲು
Update: 2023-10-31 23:30 IST
ಅನಿಲ್ ಆ್ಯಂಟನಿ
ಕಾಸರಗೋಡು : ಕುಂಬಳೆಯಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ವೀಡಿಯೊ ದೃಶ್ಯಗಳನ್ನು ಬಳಸಿ ಧಾರ್ಮಿಕ ಭಾವನೆ ಕೆರಳಿಸುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಅನಿಲ್ ಆ್ಯಂಟನಿ ವಿರುದ್ಧ ಕಾಸರಗೋಡು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ.ಟಿ.ಸಿದ್ದಾರ್ಥನ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಾಲೇಜು ಸಮೀಪ ಬಸ್ ನಿಲುಗಡೆಗೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಬಸ್ ತಡೆದ ವೀಡಿಯೊ ದೃಶ್ಯಾವಳಿಗಳನ್ನು ಬಳಸಿ ಅಪ ಪ್ರಚಾರ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.