ನೇಣು ಬಿಗಿದ ಸ್ಥಿತಿಯಲ್ಲಿ ಮಂಜೇಶ್ವರ ಠಾಣೆಯ ಎಎಸ್ಐ ಮೃತದೇಹ ಪತ್ತೆ
Update: 2025-08-22 11:10 IST
ಮಧು
ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಓರ್ವರು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕುತ್ತಿಕೋಲ್ ನಿವಾಸಿ ಮಧು (50) ಮೃತಪಟ್ಟವರು.
ಪೊಲೀಸ್ ಕ್ವಾಟರ್ಸ್ ನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಕ್ವಾಟರ್ಸ್ ನಲ್ಲಿ ಇವರ ಡೆತ್ ನೋಟ್ ಲಭಿಸಿದೆ ಎಂದು ತಿಳಿದು ಬಂದಿದೆ.
ನಿಷ್ಠಾವಂತ ಅಧಿಕಾರಿಯಾಗಿದ್ದ ಇವರು ಬದಿಯಡ್ಕ, ಆದೂರು, ಕಾಸರಗೋಡು ನಗರ ಪೊಲೀಸ್ ಠಾಣೆ ಗಳಲ್ಲಿ ಸೇವೆ ಸಲ್ಲಿಸಿದ್ದರು.