×
Ad

ಚೆರ್ವತ್ತೂರು | ರಾ. ಹೆದ್ದಾರಿ ಕಾಮಗಾರಿ ವೇಳೆ ಗುಡ್ಡ ಕುಸಿತ: ಮಣ್ಣಿನಡಿಗೆ ಸಿಲುಕಿ ಓರ್ವ ಮೃತ್ಯು

Update: 2025-05-12 11:57 IST

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣಿನಡಿಗೆ ಸಿಲುಕಿ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಚೆರ್ವತ್ತೂರು ಎಂಬಲ್ಲಿ ನಡೆದಿದೆ. ಮೂವರನ್ನು ರಕ್ಷಿಸಲಾಗಿದೆ.

ಚೆರ್ವತ್ತೂರ್ ಮಟ್ಟಲಾಯಿ ಎಂಬಲ್ಲಿ ಈ ಘಟನೆ ನಡೆದಿದೆ. 

ಘಟನೆಯಲ್ಲಿ ಮಣ್ಣಿನಡಿಯಲ್ಲಿ ನಾಲ್ವರು ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹರಸಾಹಸ ಪಟ್ಟು ನಾಲ್ವರನ್ನು ಹೊರತೆಗೆದಿದ್ದಾರೆ. ಈ ಪೈಕಿ ಓರ್ವ ಮೃತಪಟ್ಟಿದ್ದಾರೆ. ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ರಸ್ತೆ ಬದಿಯ ಗುಡ್ಡವು ಭಾರೀ ಕುಸಿದು ಬಿದ್ದಿದೆ. ಇದರಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಗಾಯಗೊಂಡ ಕಾರ್ಮಿಕರನ್ನು ಚೆರ್ವತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News