×
Ad

ಕಾಸರಗೋಡು: ಮುಂದುವರಿದ ಮಳೆ ಆರ್ಭಟ, ಹಲವಡೆ ಹಾನಿ, ಶಾಲಾ ಕಾಲೇಜುಗಳಿಗೆ ರಜೆ

Update: 2023-07-06 12:04 IST

ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದಲ್ಲದೇ ಕಡಲ್ಕೊರೆತ ತೀವ್ರಗೊಂಡಿರುವ ಬಗ್ಗೆ ವರದಿಯಾಗಿದೆ.

ಉಪ್ಪಳ ಮುಸೋಡಿ, ಕುಂಬಳೆ ಕೊಯಿಪ್ಪಾಡಿ ಮೊದಲಾದೆಡೆ ಹಲವು ಮನೆಗಳು ಅಪಾಯದಲ್ಲಿದ್ದು, ಹತ್ತಕ್ಕೂ ಅಧಿಕ ಮನೆಗಳು ಕುಸಿದಿವೆ. ಪೈವಳಿಕೆ ಸಮೀಪದ ಚಿಪ್ಪಾರ್ ನ ಖಾಸಗಿ ಶಾಲೆಯೊಂದರ ಆವರಣ ಗೋಡೆ ಕುಸಿದು ಬಿದ್ದಿದೆ. ಗುಡ್ಡವೊಂದು ಜರಿದು ಬಿದ್ದಿದ್ದು, ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

ಉಪ್ಪಳ ಹೊಳೆಯ ಜೋಡುಕಲ್ಲು ಮಡಂದೂರು - ದೇರಂಬಳ ಸಂಪರ್ಕದ ಕಾಲ್ಸೇತುವೆ ಕುಸಿದು ಬಿದ್ದ ಪರಿಣಾಮ ಸಂಪರ್ಕ ಕಡಿತಗೊಂಡಿದೆ. ಮಧು ವಾಹಿನಿ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಮಧೂರು ದೇವಸ್ಥಾನದ ಆವರಣ ದೊಳಗೆ ನೀರು ನುಗ್ಗಿದೆ. ಜಿಲ್ಲೆಯ ಎಲ್ಲಾ ನದಿ ಗಳು ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಲವಾರು ವಿದ್ಯುತ್ ಕಂಬಗಳು ಧರಶಾಹಿಯಾದ ಪರಿಣಾಮ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಗುಡ್ಡಗಳು ಜರಿದು ಬಿದ್ದಿರುವುದರಿಂದ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಮಳೆ ಹಿನ್ನಲೆ ಯಲ್ಲಿ ಜಿಲ್ಲೆಯ ಕಾಲೇಜು ಸೇರಿದಂತೆ ಶಾಲೆ ಗಳಿಗೆ ಮೂರನೇ ದಿನವಾದ ಇಂದು ಕೂಡಾ ರಜೆ ನೀಡಲಾಗಿದೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News