×
Ad

ಭಾರೀ ಮಳೆ: ಕಾಸರಗೋಡು ಜಿಲ್ಲೆಯಲ್ಲಿ ಮೇ 29, 30ರಂದು ಶಾಲೆ, ಮದ್ರಸಗಳಿಗೆ ರಜೆ ಘೋಷಣೆ

Update: 2025-05-28 15:11 IST

ಸಾಂದರ್ಭಿಕ ಚಿತ್ರ

ಕಾಸರಗೋಡು: ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಮೇ 29 ಮತ್ತು 30ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಸರಗೋಡು ಜಿಲ್ಲೆಯಲ್ಲಿ ಮೇ 29, 30ರಂದು ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಇನ್ಬಾ ಶೇಖರ್ ಆದೇಶ ನೀಡಿದ್ದಾರೆ.

ವೃತ್ತಿಪರ ಶಿಕ್ಷಣ ಸಂಸ್ಥೆಗಳು, ಸ್ಪೆಷಲ್ ಕ್ಲಾಸ್, ಟ್ಯೂಶನ್ ಸೆಂಟರ್, ಅಂಗನವಾಡಿ, ಮದ್ರಸ ಮೊದಲಾದವುಗಳಿಗೆ ರಜೆ ಅನ್ವಯವಾಗಲಿದೆ. ಪೂರ್ವನಿಗದಿತ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕ್ವಾರಿಗಳು ಕಾರ್ಯಾಚರಿಸುವಂತಿಲ್ಲ

ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಮೇ 29 ಮತ್ತು 30ರಂದು ಜಿಲ್ಲೆಯಲ್ಲಿ ಕ್ವಾರಿಗಳು ಕಾರ್ಯಾಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News