ಆ.7ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ: ಡಿಸಿ ಅರ್ಜುನ್ ಪಾಂಡ್ಯನ್
Update: 2026-08-06 19:43 IST
ಕಾಸರಗೋಡು : ಭಾರಿ ಮಳೆಯಾಗುವ ಮುನ್ಸೂಚನೆಯಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಜಿಲ್ಲೆಯ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆ.7ರ ಶುಕ್ರವಾರ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ರಜೆ ಯಾರಿಗೆಲ್ಲಾ ಅನ್ವಯ ?
ಕಾಲೇಜುಗಳು, ಪ್ರೊಫೆಷನಲ್ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಸೆಂಟರ್‌ಗಳು, ಐಸಿಎಸ್‌ಇ (ICSE), ಸಿಬಿಎಸ್‌ಇ (CBSE) ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸ ಸೇರಿದಂತೆ ಎಲ್ಲಾ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗುತ್ತದೆ.
ಪರೀಕ್ಷೆಗಳು: ಮುಂಚಿತವಾಗಿ ನಿಗದಿಪಡಿಸಲಾದ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನ ಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.