ಜು. 31ರಂದು ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ

ಭಾರಿ ಮಳೆಯ ಮುನ್ನೆಚ್ಚರಿಕೆ

Update: 2026-07-30 21:37 IST

ಕಾಸರಗೋಡು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.31ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಪರಿಗಣಿಸಿ 'ಆರೆಂಜ್ ಅಲರ್ಟ್' ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಯಾವೆಲ್ಲಾ ಸಂಸ್ಥೆಗಳಿಗೆ ರಜೆ ಅನ್ವಯಿಸುತ್ತದೆ?

ಜಿಲ್ಲಾಧಿಕಾರಿಗಳ ಆದೇಶದನ್ವಯ ವೃತ್ತಿಪರ (Professional) ಕಾಲೇಜುಗಳು, ಸಾಮಾನ್ಯ ಕಾಲೇಜುಗಳು, ಅಂಗನವಾಡಿಗಳು, ಶಾಲೆಗಳು, ಟ್ಯೂಷನ್ ಸೆಂಟರ್‌ಗಳು, ಸಿ.ಬಿ.ಎಸ್.ಇ (CBSE) ಹಾಗೂ ಐ.ಸಿ.ಎಸ್.ಇ (ICSE) ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೂ ಈ ರಜೆ ಕಡ್ಡಾಯವಾಗಿ ಅನ್ವಯಿಸಲಿದೆ.

ಪರೀಕ್ಷೆಗಳು ಎಂದಿನಂತೆ ನಡಯಲಿವೆ ಆದರೆ, ಜಿಲ್ಲೆಯ ವಸತಿ ಶಾಲೆಗಳಿಗೆ (Residential Schools) ಈ ರಜೆ ಅನ್ವಯಿಸುವುದಿಲ್ಲ. ಅಷ್ಟೇ ಅಲ್ಲದೆ, ಮುಂಚಿತವಾಗಿ ನಿಗದಿಪಡಿಸಲಾದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷೆಗಳು, ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳು (Interviews) ಯಾವುದೇ ಬದಲಾವಣೆಯಿಲ್ಲದೆ ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿವೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News