ಜುಲೈ 5 ರಂದು ಶಾಲೆಗಳಿಗೆ ರಜೆ: ಕಾಸರಗೋಡು ಜಿಲ್ಲಾಧಿಕಾರಿ
Update: 2023-07-04 17:00 IST
ಜಿಲ್ಲಾಧಿಕಾರಿ ಇಂಪಾಶೇಖರ್
ಕಾಸರಗೋಡು : ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಶಾಲೆಗಳಿಗೆ ನಾಳೆ (ಜುಲೈ 5) ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.
ರಜೆ ಅಂಗನವಾಡಿ ಹಾಗೂ ಮದ್ರಸಗಳಿಗೆ ಅನ್ವಯವಾಗಲಿದೆ. ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ. ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.