×
Ad

ಕಾಸರಗೋಡು | ಖಾಸಗಿ ಬಸ್‌ಗೆ ಕಂಟೈನರ್ ಲಾರಿ ಢಿಕ್ಕಿ : ಚಾಲಕ ಸೇರಿದಂತೆ ನಾಲ್ವರಿಗೆ ಗಾಯ

Update: 2024-05-13 13:01 IST

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ‌

ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿಯೊಂದು  ಮುಂದೆ ಬರುತ್ತಿದ್ದ ಇನ್ನೊಂದು ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಬಸ್ಸು ಚಾಲಕ ಉಪ್ಪಳದ ಅಶ್ರಫ್ ಹಾಗೂ ನಾಲ್ವರು ಪ್ರಯಾಣಿಕರು ಗಾಯ ಗೊಂಡಿದ್ದಾರೆ. ಬಸ್ಸಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಸಿಲುಕಿದ್ದ ಚಾಲಕನನ್ನು ನಾಗರಿಕರು ಹರಸಾಹಸಪಟ್ಟು ಹೊರ ತೆಗೆದಿದ್ದಾರೆ. ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತು.

 ಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರು ಸಂಚಾರ ಸುಗಮ ಗೊಳಿಸಿದರು. ಬಸ್ಸು ತಲಪಾಡಿ ಯಿಂದ ಕಾಸರಗೋಡಿಗೆ ಹಾಗೂ ಲಾರಿ ಮಂಗಳೂರು ಕಡೆಗೆ ತೆರಳುತ್ತಿತ್ತು. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News