×
Ad

ಕಾಸರಗೋಡು : ಭಾರೀ ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿ ಮೃತ್ಯು

Update: 2023-07-03 19:03 IST

ಕಾಸರಗೋಡು: ಭಾರೀ ಗಾಳಿ ಮಳೆಗೆ ಮರ ಬಿದ್ದು, ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಪುತ್ತಿಗೆ ಸಮೀಪದ ಅಂಗಡಿಮೊಗರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಅಂಗಡಿ ಮೊಗರ್ ಸರಕಾರಿ ಸೆಕೆಂಡರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಆಯಿಷತ್ ಮಿನ್ ಹಾ (11) ಮೃತಪಟ್ಟ ವಿದ್ಯಾರ್ಥಿನಿ.

ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಮರವು ಮುರಿದು ಮೈ ಮೇಲೆ ಬಿದ್ದಿದ್ದು, ಪರಿಸರ ವಾಸಿಗಳು ಬಾಲಕಿಯನ್ನು  ಕುಂಬಳೆಯ ಆಸ್ಪತ್ರೆಗೆ ತಲುಪಿಸಿದ್ದು, ಆಗಲೇ ಬಾಲಕಿ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News