×
Ad

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

Update: 2024-05-06 12:13 IST

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆದೂರು ಮಂಞಂಪಾರಯ ಪಯಸ್ವಿನಿ ಹೊಳೆಯಲ್ಲಿ ರವಿವಾರ ಸಂಜೆ ನಡೆದಿದೆ.

ಮೃತ ಯುವಕನನ್ನು ಮಂಞಂಪಾರ ನಿವಾಸಿ ಇಲ್ಯಾಸ್ (31) ಎಂದು ಗುರುತಿಸಲಾಗಿದೆ.ಸ್ನಾನಕ್ಕಿಳಿದ ಸಂದರ್ಭದಲ್ಲಿ ಮುಳುಗಿದ್ದು, ಸ್ಥಳೀಯರು ಮೇಲಕ್ಕೆತ್ತಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ

ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತ ದೇಹವನ್ನು ಮೇಲಕ್ಕೆತ್ತಿದ ಬಳಿಕ ಆದೂರು ಠಾಣಾ ಪೊಲೀಸರು ಮಹಜರು ನಡೆಸಿದರು.

ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿ ಸಲಾಗಿದ್ದು,ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುತ್ತದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News