×
Ad

ಕಾಸರಗೋಡು | ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ

Update: 2025-04-18 15:22 IST

ಸಾಂದರ್ಭಿಕ ಚಿತ್ರ

ಕಾಸರಗೋಡು : ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಮೃತರನ್ನು ಚೆಂಗಳದ ಶರೀಫ್ (45) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಬೈಕ್ ನಲ್ಲಿ ಬಂದ ಶರೀಫ್ ಅವರು ಚಂದ್ರಗಿರಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದರು. ಪ್ರತ್ಯಕ್ಷದರ್ಶಿಯೋರ್ವ ನೀಡಿದ ಮಾಹಿತಿಯಂತೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನಾಗರಿಕರು ಶೋಧ ನಡೆಸಿದ್ದರು. ರಾತ್ರಿಯಾದರೂ ಮೃತದೇಹ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಶುಕ್ರವಾರ ಬೆಳಿಗ್ಗೆ ಮತ್ತೆ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News