ಸಾಂದರ್ಭಿಕ ಚಿತ್ರ

ಕಾಸರಗೋಡು: ವರ್ಕಾಡಿ ಕಳಿಯೂರಿನ ಖಾಸಗಿ ವ್ಯಕ್ತಿಯೊಬ್ಬರ ಕೃಷಿ ತೋಟದಲ್ಲಿರುವ ಹೊಂಡದಲ್ಲಿ ಸುಮಾರು 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತದೇಹ ಕೆಲವು ದಿನಗಳ ಹಿಂದೆಯೇ ನೀರಿಗೆ ಬಿದ್ದಿರಬಹುದು ಅಥವಾ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಕಳಿಯೂರು ಅರಂತೋಡಿಯ ತಿಮ್ಮಪ್ಪ ಭಟ್ ಅವರ ಭತ್ತದ ಗದ್ದೆಯ ಸಮೀಪ ಕೃಷಿ ಉದ್ದೇಶಕ್ಕಾಗಿ ನಿರ್ಮಿಸಲಾಗಿದ್ದ ಹೊಂಡದಲ್ಲಿ ಶುಕ್ರವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಹೊಂಡದಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಕಾರ್ಮಿಕರು ತೋಟದ ಮಾಲಕರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಜೇಶ್ವರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೊಂಡದಿಂದ ಮೃತದೇಹವನ್ನು ಹೊರತೆಗೆದಿದ್ದು, ಬಳಿಕ ಅದನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ವ್ಯಕ್ತಿ ಅನ್ಯರಾಜ್ಯದ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವು ಬರ್ಮುಡಾ ಹಾಗೂ ಟಿ-ಶರ್ಟ್ ಧರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor