×
Ad

KASARGOD | ತೂಮಿನಾಡು ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ 2ಕ್ಕೆ ಏರಿಕೆ

ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ಕೊನೆಯುಸಿರು

Update: 2026-02-03 10:27 IST

ಶೇಕುಂಞಿ

ಮಂಜೇಶ್ವರ: ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ.

ಮಾರಣಾಂತಿಕವಾಗಿ ಇರಿತಕ್ಕೆ ಒಳಗಾಗಿದ್ದ ಶೇಕುಂಞಿ ಎಂಬವರು ಇಂದು(ಫೆ.3) ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಪತ್ನಿಯ ಅಕ್ಕನ ಮಗಳು ಜುಮೈಲಾ(17) ಸೋಮವಾರ ಸಂಜೆ ಕೊಲೆಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದಾನೆ.

 

ಉಮರ್ ಫಾರೂಕ್, ಜುಮೈಲಾ, ಶೇಕುಂಞಿ

ಕುಟುಂಬ ಕಲಹ, ಆಸ್ತಿ ವಿಚಾರವಾಗಿ ಉಮರ್ ಫಾರೂಕ್ ಮತ್ತು ಆತನ ಪತ್ನಿಯ ತಂಗಿ(ನಾದಿನಿ)ಯ ಪತಿ ಶೇಕುಂಞಿ ಮಧ್ಯೆ ಈ ಮೊದಲೇ ವೈಮನಸ್ಸು ಇತ್ತೆನ್ನಲಾಗಿದೆ.

ಇದೇ ವಿಚಾರವಾಗಿ ಸೋಮವಾರ ಸಂಜೆ ಉಮರ್ ಫಾರೂಕ್ ಮತ್ತು ಶೇಕುಂಞಿ ಮಧ್ಯೆ ನಡೆದ ವಾಗ್ವಾದ ತಾರಕ್ಕೇರಿದೆ. ಈ ವೇಳೆ ಶೇಕುಂಞಿಯವರ ಮೇಲೆ ಆರೋಪಿ ಉಮರ್ ಫಾರೂಕ್ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ದಾಳಿಯನ್ನು ತಡೆಯಲೆತ್ನಿಸಿದ ಪುತ್ರಿ ಜುಮೈಲಾರಿಗೂ ಉಮರ್ ಫಾರೂಕ್ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಜುಮೈಲಾ ಸ್ಥಳದಲ್ಲೇ ಮೃತಪಟ್ಟಿದ್ದರು.

ದಾಳಿಗೊಳಗಾಗಿ ಗಂಭೀರಾವಸ್ಥೆಯಲ್ಲಿದ್ದ ಶೇಕುಂಞಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಕರಣದ ಆರೋಪಿ ಉಮರ್ ಫಾರೂಕ್ ನನ್ನು ಪೊಲೀಸರು ಸೋಮವಾರ ಸಂಜೆಯೇ ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News