×
Ad

ಕಾಸರಗೋಡು ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಕೇರಳ ವಿದ್ಯುತ್ ಸಚಿವ ಕೆ. ಕೃಷ್ಣನ್ ಕುಟ್ಟಿ

Update: 2025-08-15 15:15 IST

ಕಾಸರಗೋಡು: ವಿದ್ಯಾನಗರ ನಗರಸಭಾ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವದಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕೇರಳ ವಿದ್ಯುತ್ ಸಚಿವ ಕೆ. ಕೃಷ್ಣನ್ ಕುಟ್ಟಿ ಧ್ವಜಾರೋಹಣ ನೆರವೇರಿಸಿ ವಂದನೆ ಸ್ವೀಕರಿಸಿದರು.

ಆಕರ್ಷಕ ಪಥಸಂಚಲನ ನಡೆಯಿತು.

ಶಾಸಕ ರಾದ ಎನ್ . ಎ ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್, ಸಿ. ಎಚ್ ಕುಞಂಬು, ಇ. ಚಂದ್ರಶೇಖರನ್, ಎಂ.ರಾಜಗೋಪಾಲ್ , ಜಿಲ್ಲಾ ಪಂಚಾಯತ್ ಅಧ್ಯಕ್ಷ ಬೇಬಿ ಬಾಲಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ , ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿಜಯ್ ಭರತ್ ರೆಡ್ಡಿ ಉಪಸ್ಥಿತರಿದ್ದರು.

 ಪದ್ಮಶ್ರೀ ಪುರಸ್ಕೃತ ಸತ್ಯನಾರಾಯಣ ಬೆಳೆರಿಯಾ ರವರನ್ನು ಸಚಿವರು ಗೌರವಿಸಿದರು. ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಖಾದರ್ ಬದರಿಯ, ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿ ಪಿ. ಅಖಿಲ್ ಹಾಗೂ ಇನ್ನಿತರ ಅಧಿಕಾರಿಗಳು , ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

 





 



 


 



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News