×
Ad

ಕಾಸರಗೋಡು: ವಿಷಾಹಾರ ಸೇವನೆ; ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Update: 2024-11-21 23:25 IST

ಸಾಂದರ್ಭಿಕ ಚಿತ್ರ

ಕಾಸರಗೋಡು : ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ನಗರದ ವಿವಿಧ ಆಸ್ಪತ್ರೆ ಗಳಲ್ಲಿ ಚಿಕಿತ್ಸೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ.

ಅಲಂಪಾಡಿ ಹಯರ್ ಸೆಕಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಗೆ ಹಾಲು ವಿತರಿಸಲಾಗಿದ್ದು, ಸಂಜೆ ಮನೆಗೆ ಬಂದ ವಿದ್ಯಾರ್ಥಿಗಳು ವಾಂತಿ ಹಾಗೂ ಇನ್ನಿತರ ರೀತಿಯಲ್ಲಿ ಅಸ್ವಸ್ಥತೆ ಕಂಡು ಬಂದಿದ್ದು, ವಿದ್ಯಾರ್ಥಿಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ, ಚೆಂಗಳ ಸಹಕಾರಿ ಆಸ್ಪತ್ರೆ ಹಾಗೂ ವಿದ್ಯಾನಗರ, ಕಾಸರಗೋಡು ನಗರದ ವಿವಿಧ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News