×
Ad

ಕಾಸರಗೋಡು | 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ; ಮತದಾನ ಆರಂಭ

ಡಿ.13 ರಂದು ಮತ ಎಣಿಕೆ

Update: 2025-12-11 09:35 IST

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಮತದಾನ ಪ್ರಕ್ರಿಯೆ ಬೆಳಿಗ್ಗೆ ಆರಂಭ ಗೊಂಡಿದ್ದು, ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆ 9 ಗಂಟೆ ತನಕ 12 ಶೇಕಡಾ ಮತದಾನವಾಗಿದೆ.

ಜಿಲ್ಲಾ ಪಂಚಾಯತ್‌ನ 18 ಡಿವಿಜನ್, ಆರು ಬ್ಲಾಕ್ ಪಂಚಾಯತ್ , ಮೂರು ನಗರಸಭೆ ಹಾಗೂ 38 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯುತ್ತಿದೆ.

1370 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. 2855 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 11,12,190 ಮತದಾರರಿದ್ದಾರೆ

119 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಮತಗಟ್ಟೆ ಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ.

ಮತ ಎಣಿಕೆ ಡಿ.13 ರಂದು ನಡೆಯಲಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News