×
Ad

ಕಾಸರಗೋಡು | ಚಲಿಸುತ್ತಿದ್ದ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆ: ಚಿತ್ತಾರಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

Update: 2024-05-23 10:50 IST

ಕಾಸರಗೋಡ, ಮೇ 23: ಅನಿಲ ಸಾಗಾಟದ ಟ್ಯಾಂಕರ್ ವೊಂದು ಚಲಿಸುತ್ತಿದ್ದಂತೆಯೇ ಅನಿಲ ಸೋರಿಕೆ ಉಂಟಾದ ಘಟನೆ ಹೊಸದುರ್ಗ ಸಮೀಪದ ಚಿತ್ತಾರಿ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಅನಿಲ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಟ್ಯಾಂಕರ್ ಅನ್ನು ನಿಲ್ಲಿಸಿದ ಚಾಲಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾನೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಅನಿಲ ಸೋರಿಕೆ ತಡೆಗಟ್ಟಲು ಪ್ರಯತ್ನಿಸುತ್ತಿದ್ದಾರೆ.

ಈ ನಡುವೆ ಅನಿಲ ಸೋರಿಕೆ ಹಿನ್ನೆಲೆಯಲ್ಲಿ ಈ ಪ್ರದೇಶದ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸದ್ಯ ಸ್ಥಗಿತಗೊಳಿಸಲಾಗಿದೆ.


 ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News