×
Ad

ಕಾಸರಗೋಡು: ಅಕ್ರಮ ಮದ್ಯ ಸಾಗಾಟ; ಇಬ್ಬರ ಬಂಧನ

Update: 2024-06-01 09:44 IST

ಕಾಸರಗೋಡು:ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಮದ್ಯವನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡು ಇಬ್ಬರನ್ನು ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.

ಆರೋಪಿಗಳನ್ನು ಮಂಜೇಶ್ವರ ಹೊಸಂಗಡಿಯ ಮೀಂಜ ಗ್ರಾಮದ ವಿನೀತ್ ಶೆಟ್ಟಿ (25) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.

 ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರನ್ನು ತಡೆದು ಕುಂಬಳೆ ಆರಿಕ್ಕಾಡಿ ಯಲ್ಲಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನ ಡಿಯಲ್ಲಿ ಬಚ್ಚಿಟ್ಟು ಮದ್ಯ ಸಾಗಿಸಲಾಗುತ್ತಿತ್ತು.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News