×
Ad

ಕಾಸರಗೋಡು| ಲಾರಿ ಢಿಕ್ಕಿ: ಇಬ್ಬರು ಕಾರ್ಮಿಕರು ಮೃತ್ಯು, ಓರ್ವನಿಗೆ ಗಂಭೀರ ಗಾಯ

Update: 2025-07-15 19:31 IST

ಕಾಸರಗೋಡು: ಲಾರಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟು , ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರು ನಲ್ಲಿ ನಡೆದಿದೆ.

ಬಿಹಾರ ಮೂಲದ ರಾಜಕುಮಾರ್ ಮಾಥುರ್ (25) ಹಾಗೂ ರಾಜಸ್ಥಾನದ ಗಣಪತಿ ರಾಯ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಕಾರ್ಮಿಕರಾಗಿದ್ದರು. ಕಾಸರಗೋಡು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಮಿಕರಿಗೆ ಢಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪಿಕಪ್ ವಾಹನ ನಿಲ್ಲಿಸಿ ಕೆಲಸ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ತಲಪಿಸಿದರೂ ಇಬ್ಬರು ಮೃತಪಟ್ಟರು. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ  ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News