×
Ad

ಕಾಸರಗೋಡು: ಕಯ್ಯಾರ ಕಿಞ್ಞಣ್ಣ ರೈ ಸಾಂಸ್ಕೃತಿಕ ಭವನಕ್ಕೆ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭೇಟಿ

Update: 2026-06-10 14:25 IST

ಕಾಸರಗೋಡು: ಕರ್ನಾಟಕ ಏಕೀಕರಣ ಹೋರಾಟಗಾರ ನಾಡೋಜ ಕವಿ ಡಾ. ಕಯ್ಯಾರ ಕಿಞ್ಞಣ್ಣ ರೈ ಯವರ ಸ್ಮರಣಾರ್ಥ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಾಸರಗೋಡು ಜಿಲ್ಲೆಯ ಪೆರಡಾಳದಲ್ಲಿ ನಿರ್ಮಿಸಿದ ಸಾಂಸ್ಕೃತಿಕ ಭವನವನ್ನು ಕಾಸರಗೋಡಿನ ನೂತನ ಶಾಸಕ ಕಲ್ಲಟ್ರ ಮಾಹಿನ್ ಹಾಜಿಯವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯಕಟ್ಟೆ, ಬದಿಯಡ್ಕ ಪಂಚಾಯತ್ ಮಾಜಿ ಅಧ್ಯಕ್ಷ ಮಾಹಿನ್ ಕೇಳೋಟ್, ನಿವೃತ್ತ ಪ್ರಾಂಶುಪಾಲ ಎ. ಶ್ರೀನಾಥ್, ಕರ್ನಾಟಕ ಗಮಕ ಕಲಾ ಪರಿಷತ್ತು ಕೇರಳ ಘಟಕದ ಅಧ್ಯಕ್ಷ ಟಿ. ಶಂಕರನಾರಾಯಣ ಭಟ್, ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಅನ್ವರ್ ಸಾದಾತ್ ಮುಂತಾದವರು ಜೊತೆಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News