ಕಾಸರಗೋಡು | ಕಚ್ಚಾ ಬಾಂಬ್ ಸ್ಫೋಟ: ಸಾಕುನಾಯಿ ಬಲಿ
Update: 2025-12-12 01:00 IST
ಕಾಸರಗೋಡು, ಡಿ.11: ಕಚ್ಚಾ ಬಾಂಬ್ ಸ್ಫೋಟಗೊಂಡು ಸಾಕು ನಾಯಿ ಬಲಿಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ಡಾಜೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂರು ಕಚ್ಚಾ ಬಾಂಬ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಫೋಟದ ಶಬ್ದ ಕೇಳಿ ಗಮನಿಸಿದಾಗ ನಾಯಿ ಬಲಿಯಾಗಿರುವುದು ಕಂಡುಬಂದಿದೆ ಎಂದು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹಂದಿಯನ್ನು ಕೊಳ್ಳಲು ಸದ್ರಿ ಕಚ್ಚಾ ಬಾಂಬ್ ಇಟ್ಟಿರಬಹುದು ಎಂದು ಸಂಶಯಿಸಲಾಗಿದೆ.
ಬದಿಯಡ್ಕ ಠಾಣಾ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.