×
Ad

ಕಾಸರಗೋಡು: ರೈಲು ಢಿಕ್ಕಿ; ಮೂವರು ಮಹಿಳೆಯರು ಸ್ಥಳದಲ್ಲೇ ಮೃತ್ಯು

Update: 2024-09-14 21:08 IST

ಸಾಂದರ್ಭಿಕ ಚಿತ್ರ

ಕಾಸರಗೋಡು: ರೈಲು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ಶನಿವಾರ ಸಂಜೆ ನಡೆದಿದೆ.

ಮೃತಪಟ್ಟವರನ್ನು ಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ (70), ಏಂಜೆಲ್ (30) ಮತ್ತು ಆಲಿಸ್ ಥೋಮಸ್ (60) ಎಂದು ಗುರುತಿಸಲಾಗಿದೆ.

ಕೊಟ್ಟಾಯಂ ಚಿಂಗಾವನ ಎಂಬಲ್ಲಿಂದ ರಾಜಾಪುರ ಕಲ್ಲಾರಿನ ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಸಂಜೆ 7.30ರ ಸುಮಾರಿಗೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ತೆರಳಲು ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದ ಸಂದರ್ಭ ರೈಲು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೊಸದುರ್ಗ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಮಹಜರು ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News