ಕಾಸರಗೋಡು | ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
Update: 2025-09-05 13:51 IST
ಐರಿನ್ ಡಿಸೋಜ
ಕಾಸರಗೋಡು: ಮಹಿಳೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ.
ಮೃತರನ್ನು ಅಡ್ಕದಗುರಿಯ ಐರಿನ್ ಡಿಸೋಜ ( 60) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಮಲಗಿದ್ದ ಐರಿನ್ ಡಿಸೋಜ ಅವರು ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಮೃತದೇಹ ಮನೆ ಅಂಗಳದ ಬಾವಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಅಗ್ನಿ ಶಾಮಕ ದಳದ ಸಿಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ಧಾರೆ ಎಂದು ತಿಳಿದು ಬಂದಿದೆ.
ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದ್ಧಾರೆ.