×
Ad

ಕಾಸರಗೋಡು: ಬೈಕ್- ಸ್ಕೂಟರ್ ಢಿಕ್ಕಿ; ಓರ್ವ ಮೃತ್ಯು

Update: 2024-10-09 11:00 IST

ಮೃತ ಸ್ಕೂಟರ್ ಸವಾರ ಮಣಿಕಂಠ

ಕಾಸರಗೋಡು: ಬೈಕ್ ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತ ದ ಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಪೊಯಿನಾಚಿಯ ಮಣಿಕಂಠ (24)ಮೃತಪಟ್ಟ ಯುವಕ. ಬೈಕ್ ಸವಾರ ಮೈಲಾಟಿಯ ಪ್ರಜ್ವಲ್ (23) ಗಾಯಗೊಂಡಿದ್ದು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೇಕಲದ ಜ್ಯೂಸ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮಣಿಕಂಠ ತೆರಳುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ. ರಸ್ತೆಗೆಸೆಯಲ್ಪಟ್ಟ ಮಣಿಕಂಠನನ್ನು ಕಾಸರಗೋಡಿನ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲ್ಲಿಲ್ಲ.

ಬೇಕಲ ಠಾಣಾ ಪೊಲೀಸರು ಮಹಜರು ನಡೆಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News