×
Ad

ಕಾಸರಗೋಡು : ಜಿಲ್ಲಾಡಳಿತ ವತಿಯಿಂದ ಅರ್ಜುನ್‌ ಮೃತದೇಹಕ್ಕೆ ಅಂತಿಮ ನಮನ

Update: 2024-09-28 14:11 IST

ಕಾಸರಗೋಡು : ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ 72 ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನಿವಾಸಿ ಅರ್ಜುನ್‌ ಅವರ ಪಾರ್ಥಿವ ಶರೀರ ಆ್ಯಂಬುಲೆನ್ಸ್

Delete Edit

ಮೂಲಕ ಕಾಸರಗೋಡಿಗೆ ತಲಪಿದಾಗ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿ ಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಲು ನೆರೆದಿದ್ದರು.

ಅಂಬ್ಯುಲೆನ್ಸ್ ನಲ್ಲಿದ್ದ ಅರ್ಜುನ್ ರ ಸಹೋದರಿಯ ಪತಿ ಜಿತಿನ್, ಸಹೋದರ ಅಭಿಜಿತ್ ರವರನ್ನು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಾಂತ್ವನ ಪಡಿಸಿದರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್, ಕಾರವಾರ ಶಾಸಕ ಸತೀಶ್ ಸೈಲ್ ರವರು ಜೊತೆಗಿದ್ದರು.

 72 ದಿನಗಳ ಶೋಧದ ಬಳಿಕ ಗಂಗಾವಳಿ ನದಿಯ ಆಳಭಾಗದಲ್ಲಿ ಲಾರಿಯೊಂದರ ಒಳಗೆ ಕೊಳೆ ತ ಸ್ಥಿತಿಯಲ್ಲಿ ಅರ್ಜುನ್‌ರ ವರ ಮೃತದೇಹ ಲಭಿಸಿತ್ತು .


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News