ಕಾಸರಗೋಡು: ಕನ್ನಡಿಗರ ರೇಶನ್ ಕಾರ್ಡ್‌ನಲ್ಲಿ ಕನ್ನಡ ಮುದ್ರಿಸಲು ಕೇರಳ ಸರಕಾರ ಆದೇಶ
ಸಾಂದರ್ಭಿಕ ಚಿತ್ರ (credit: keralakaumudi.com)
ಕಾಸರಗೋಡು: ಜಿಲ್ಲೆಯ ಕನ್ನಡಿಗರ ರೇಶನ್ ಕಾರ್ಡ ಅನ್ನು ಕನ್ನಡದಲ್ಲಿ ಮುದ್ರಿಸಲು ಕೇರಳ ಸರಕಾರ ಆದೇಶಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.
ಕಾಸರಗೋಡಿನ ರೇಶನ್ ಕಾರ್ಡ್/ಮತದಾರರ ಗುರುತಿನ ಚೀಟು ಸಹಿತ ಎಲ್ಲಾ ದಾಖಲೆಗಳನ್ನು ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮುದ್ರಿಸಲಾಗಿದೆ. ಇದರಿಂದ ಗಡಿಭಾಗದ ಕನ್ನಡಿಗರಿಗೆ ಸಮಸ್ಯೆಯಾಗಿದೆ. ಹಾಗಾಗಿ ಸ್ಥಳೀಯ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಪರಿಗಣಿಸಿ ರೇಶನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸುವಾಗ ಕನ್ನಡ ಭಾಷೆಯನ್ನು ಅಳವಡಿಸುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇನಮರದ, ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ,ಶಾಸಕರಾದ ಎನ್.ಎ.ನೆಲ್ಲಿಕುನ್ನು, ಎ.ಕೆ. ಎಂ. ಅಶ್ರಫ್, ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಅದರಂತೆ ಕೇರಳ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಈ ಬಗ್ಗೆ ಕ್ರಮ ಕೈಗೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿರುತ್ತಾರೆ ಎಂದು ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.