×
Ad

ಕೇರಳ ವಿಧಾನಸಭೆ| ಬಸವಣ್ಣನವರ ವಚನ ಉಲ್ಲೇಖಿಸಿ ಸದನದ ಗಮನ ಸೆಳೆದ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್

Update: 2026-06-02 22:57 IST

ಕಾಸರಗೋಡು: ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಮಂಜೇಶ್ವರ ಶಾಸಕ ಎ.ಕೆ. ಎಂ ಅಶ್ರಫ್ ಮಂಗಳವಾರ ಆರಂಭಗೊಂಡ ಮೊದಲ ಅಧಿವೇಶನದಲ್ಲಿ ಬಸವಣ್ಣ ಅವರ ವಚನವನ್ನು ಉಲ್ಲೇಖಿಸಿ ಸದನದ ಗಮನ ಸೆಳೆದರು.

ಮಾನವೀಯತೆ, ಸಮಾನತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಬಸವಣ್ಣ ಅವರ ವಚನ ಕೇರಳ ವಿಧಾನಸಭೆಯಲ್ಲಿ ಮಾರ್ಧನಿಸಿದ್ದು, ಆಡಳಿತ ಪಕ್ಷದ ಶಾಸಕರು ಮೇಜು ತಟ್ಟಿ ಅಭಿನಂದಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ಸಂದರ್ಭದಲ್ಲಿ ಬಸವಣ್ಣ ಅವರ "ಇವನಾರವ ಇವನಾರವ ಇವನಾರವನೆಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದೆನಿಸಯ್ಯ.. ಕೂಡಲಸಂಗಮದೇವ ನಿಮ್ಮ ಮನೆಯ ಮಗನೆಂದೆನಿಸಯ್ಯ" ವಚನದ ಸಾಲುಗಳನ್ನು ಉಲ್ಲೇಖಿಸಿ ಕೇರಳ ವಿಧಾನಸಭೆಯಲ್ಲಿ ಸದನದ ಗಮನ ಸೆಳೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News