ಕಾಸರಗೋಡು: ನಿಯಂತ್ರಣ ತಪ್ಪಿದ ಬೈಕ್ ಸೇತುವೆಯಿಂದ ತೋಡಿಗೆ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಕೋಯಿಪ್ಪಾಡಿ ದೇವಿನಗರದ ಜಾನಕಿ ನಿವಾಸದ ಸುಭಾಷ್ ಚಂದ್ರ (42) ಮೃತಪಟ್ಟವರು. ಇವರು ಕಟ್ಟಡ ಕಾಮಗಾರಿ ಕಾರ್ಮಿಕರಾಗಿದ್ದರು.

ಗುರುವಾರ ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಸುಭಾಷ್ ಅವರು ಶೇಡಿಕಾವು ರಸ್ತೆಯ ಮೂಲಕ ಕುಂಬಳೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಇಳಿಜಾರಿನ ಬಳಿ ತಲುಪಿದಾಗ ಬೈಕ್ ನಿಯಂತ್ರಣ ತಪ್ಪಿ ತಡೆ ಇಲ್ಲದ ಸೇತುವೆಯಿಂದ ಕೆಳಗಿರುವ ತೋಡಿಗೆ ಬಿದ್ದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುಭಾಷ್ ಚಂದ್ರ ರವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor