ಕುಂಬಳೆ: ಕಾಡುಹಂದಿಯೊಂದು ರಸ್ತೆಗೆ ಅಡ್ಡ ವಾಗಿ ಬಂದ ಪರಿಣಾಮ ಉಂಟಾದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸವಾರ ಮೃತಪಟ್ಟಿದ್ದಾರೆ.

ಮೊಗ್ರಾಲ್ ಕಡವತ್ತಿನ ಬಿ.ವಿ. ಅಬ್ದುಲ್ ಕರೀಂ (39) ಮೃತಪಟ್ಟವರು. ಇವರು ಆಟೋ ಚಾಲಕರಾಗಿ ದುಡಿಯುತ್ತಿದ್ದರು.

ಅ. 30 ರಂದು ಮುಂಜಾನೆ ಕಟ್ಟತ್ತಡ್ಕ ಎ.ಕೆ.ಜಿ. ನಗರದಲ್ಲಿ ಬೈಕ್‌ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಗೆ ಅಡ್ಡವಾಗಿ ಕಾಡುಹಂದಿ ಬಂದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಮುಂಜಾನೆ ಮೃತಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor