ಕಾಸರಗೋಡು: ಕುಂಬಳೆ ಠಾಣಾ ವ್ಯಾಪ್ತಿಯ ಕುಡಾಲ್ ಮೇರ್ಕಳ ಲೆಂಕಿನಡ್ಕ ಎಂಬಲ್ಲಿ 51 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸವಿತಾ (51) ಮೃತಪಟ್ಟವರು. ಇವರು ಶನಿವಾರ ಬೆಳಗ್ಗೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಅವರೊಂದಿಗೆ ವಾಸಿಸುತ್ತಿದ್ದ ಕರ್ನಾಟಕದ ಶಿವಮೊಗ್ಗ ನಿವಾಸಿ ಚೆನ್ನಪ್ಪ ನೆರೆಮನೆಯರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಮನೆಯ ವರಾಂಡದಲ್ಲಿದ್ದ ಹಾಸಿಗೆಯ ಮೇಲೆ ಸವಿತಾರ ಮೃತದೇಹ ಪತ್ತೆಯಾಗಿದೆ. ಅವರ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸ್ಥಳಕ್ಕೆ ಕುಂಬಳೆ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಆರ್.ಪಿ. ಅನೂಪ್ ಕೃಷ್ಣ ನೇತೃತ್ವದ ತಂಡ ತೆರಳಿ ಪರಿಶೀಲನೆ ನಡೆಸಿದೆ.

ವರ್ಷಗಳ ಹಿಂದೆ ಲೈಫ್ ಯೋಜನೆಯಡಿ ನಿರ್ಮಿಸಲಾದ ಮನೆಯಲ್ಲಿ ಸವಿತಾ ಮತ್ತು ಚೆನ್ನಪ್ಪ ವಾಸಿಸುತ್ತಿದ್ದರು. ಕಳೆದ 16 ವರ್ಷಗಳಿಂದ ಚೆನ್ನಪ್ಪ ಸವಿತಾರೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ.

ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor